ಏಕದೇವ ವಿಶ್ವಾಸದ ಇಸ್ಲಾಮಿ ಕಲ್ಪನೆ ?

ಏಕದೇವ ವಿಶ್ವಾಸವು ಇಸ್ಲಾಮ್ ಧರ್ಮದ ಮುಲಭೂತ ವಿಶ್ವಾಸವಾಗಿದೆ. ಏಕದೇವ ವಿಶ್ವಾಸವೆಂಬ ತಳಹದಿಯ ಮೇಲೆಯೇ ಇಸ್ಲಾಮ್ ಧರ್ಮದ ಸೌಧ ನಿಂತಿದೆ. ಆದುದರಿಂದ ಇಸ್ಲಾಮ್ ಧರ್ಮದ ಬಗ್ಗೆ ತಿಳಿಯ ಬಯಸುವವರು ಮೊದಲು ಏಕದೇವ ವಿಶ್ವಾಸದ ಕುರಿತು ಸರಿಯಾಗಿ ಅರಿತಿರುವುದು ಅತ್ಯಗತ್ಯ.

ಈ ಜಗತ್ತಿನ ಸೃಷ್ಟಿಕರ್ತ ಒಬ್ಬನೇ, ಅವನೇ ಸಮಸ್ತ ವಿಶ್ವವನ್ನೂ ಅದೊಳಗೊಂಡಿರುವ ಸಕಲ ಚರಾಚರಗಳನ್ನೂ ಸೃಷ್ಟಿಸಿದವನು. ಮನುಷ್ಯರನ್ನೂ ಇತರ ಜೀವಜಾಲಗಳನ್ನೂ ಅವನೇ ಪೋಷಿಸಿ ಬೆಳೆಸುತ್ತಿದ್ದಾನೆ. ಸರ್ವಲೋಕದ ಒಡೆತನ ಮತ್ತು ಆಧಿಪತ್ಯವು ಅವನಿಗೆ ಸೇರಿದೆ. ಆ ಏಕದೇವನನ್ನೇ ಪವಿತ್ರ ಕುರ್ಆನಿನಲ್ಲಿ ‘ಅಲ್ಲಾಹ್’ ಎಂದು ಕರೆಯಲಾಗಿದೆ. ಜಗತ್ತಿನ ಏಕೈಕ ಸೃಷ್ಟಿಕರ್ತನೂ ಪರಿಪಾಲಕನೂ ಒಡೆಯನೂ ಅಧಿಪತಿಯು ಅಲ್ಲಾಹನೇ ಆಗಿರುವಾಗ ಮನುಷ್ಯನ ಆರಾಧನೆ, ದಾಸ್ಯ ಮತ್ತು ಅನುಸರಣೆಗಳೂ ಆತನಿಗೆ ಸಲ್ಲಬೇಕೆಂಬುದು ಬುದ್ಧಿಯ ಬೇಡಿಕೆಯಾಗಿದೆ.

Add Comment